ಅಪಘಾತಅಂತಾರಾಷ್ಟ್ರೀಯಉಪಯುಕ್ತ ಮಾಹಿತಿಗಳುಕನಕಗಿರಿಕಳ್ಳತ‌ನಕುಕನೂರುಕುಷ್ಟಗಿಕೊಪ್ಪಳಗಂಗಾವತಿಗದಗಚಿರತೆ ದಾಳಿಚುನಾವಣಾ ಬಾಂಡ್‌ ಅಕ್ರಮಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುಡಿವೋರ್ಸ್ತಾಲೂಕುಧಾರವಾಡಪರೀಕ್ಷೆಬಾಗಲಕೋಟೆರಾಜಕೀಯರಾಜ್ಯ ಸುದ್ದಿರಾಷ್ಟೀಯ ಸುದ್ದಿಲೇಖನಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಪಹಲ್ಗಾಮ್ ಭಯೊತ್ಪಾದಕರ ದಾಳಿಗೆ 28 ಜನರ ಸಾವು: ಡಿವೈಎಫ್ಐ ಖಂಡನೆ

Share News

ಪಹಲ್ಗಾಮ್ ಭಯೊತ್ಪಾದಕರ ದಾಳಿಗೆ 28 ಜನರ ಸಾವು: ಡಿವೈಎಫ್ಐ ಖಂಡನೆ

ಜನಧ್ವನಿ ಕನ್ನಡ ಸುದ್ದಿಮೂಲ

ಗಜೇಂದ್ರಗಡ:

ಕಾಶ್ಮೀರದ ಪಹಲ್ಗಾಮ್ ಸಮೀಪದಲ್ಲಿರುವ ಪ್ರಖ್ಯಾತ ಪ್ರವಾಸಿತಾಣವಾದ ಬೈಸರನ್ ಕಣಿವೆಯಲ್ಲಿ ಮಂಗಳವಾರ ನಮ್ಮ ರಾಜ್ಯದ ಶಿವಮೊಗ್ಗದ ಮಂಜುನಾಥ್ ಹಾಗೂ ಬೆಂಗಳೂರಿನ ಭರತ್ ಭೂಷಣ್ ಸೇರಿದಂತೆ 28 ಜನ ಪ್ರವಾಸಿಗರನ್ನು ಬಲಿ ಪಡೆದಿರುವ ಭಯೋತ್ಪಾದಕರ ಪೈಶಾಚಿಕ ಕ್ರೌರ್ಯವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಡಿವಾಯ್ಎಫ್ಐ ಜಿಲ್ಲಾ ಮುಖಂಡ ದಾವಲಸಾಬ ತಾಳಿಕೋಟಿ
ಮಾತನಾಡಿ
ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯು ಆಘಾತಕಾರಿಯಾದುದು. ಅಮಾಯಕರ ಮೇಲೆ ಹೀನ ದಾಳಿಗೈದು ಅಮೂಲ್ಯ ಜೀವಗಳನ್ನು ಕೊಲೆಗೈದ ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಕೇಂದ್ರ ಸರಕಾರ ಖಾತ್ರಿಪಡಿಸಬೇಕು.

ಜಮ್ಮು ಕಾಶ್ಮೀರ ಜನರ ಸಮಸ್ಯೆಗಳಿಗೆ ರಾಜಕೀಯ ಪರಿಹಾರವನ್ನು ಕಂಡುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.

ಹೃದಯ ವಿದ್ರಾವಕ ಘಟನೆಯಲ್ಲಿ ಮಡಿದ ಕುಟುಂಬಗಳಿಗೆ ಡಿವೈಎಫ್ಐ ಸಂತಾಪಗಳನ್ನು ಸಲ್ಲಿಸುತ್ತದೆ. ರಾಷ್ಟ್ರದ ಭದ್ರತೆ ಅತ್ಯಂತ ಪ್ರಮುಖವಾಗಿದೆ. ಕೇಂದ್ರ ಸರಕಾರ ಜಮ್ಮು ಕಾಶ್ಮೀರದಲ್ಲಿ ಸಹಜ ಸ್ಥಿತಿಯಿದೆ ಎಂದು ಹೇಳುತ್ತಲೇಯಿದೆಯಾದರೂ ವಾಸ್ತವ ಪರಿಸ್ಥಿತಿಯಲ್ಲಿ ಅಲ್ಲಿನ ನಿವಾಸಿಗಳು, ವಲಸೆ ಕಾರ್ಮಿಕರು ಹಾಗೂ ಪ್ರವಾಸಿಗರ ಮೇಲೆ ದಾಳಿಗಳು ನಡೆಯುತ್ತಿವೆ. ಆದ್ದರಿಂದ ಕೇಂದ್ರ ಸರಕಾರ ಈಗಲಾದರೂ ಜಮ್ಮು ಕಾಶ್ಮೀರದಲ್ಲಿ ಸಹಜಸ್ಥಿತಿ ನೆಲೆಸಲು ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.

ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದು ಹಾಕಲು ಸಾಧ್ಯವಿಲ್ಲ. ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ ಪಿಡುಗಿನ ವಿರುದ್ಧ ದೇಶದ ಜನತೆ ಒಟ್ಟಾಗಿ ನಿಲ್ಲುವುದು ಅಗತ್ಯವಿದೆ. ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ಕೇಂದ್ರ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.


Share News

Related Articles

Leave a Reply

Your email address will not be published. Required fields are marked *

Back to top button