
ತ್ವರಿತ ಹಾಗೂ ಗುಣಮಟ್ಟದ ಕಾಮಗಾರಿಗೆ ಬಸವರಾಜ ಬೊಮ್ಮಾಯಿ ಸೂಚನೆ.
ಗಜೇಂದ್ರಗಡ:
ಗಜೇಂದ್ರಗಡ ಹತ್ತಿರದ ಬೇವಿನಕಟ್ಟಿ ಕ್ರಾಸ್ ಬಳಿ ಕೊಪ್ಪಳ ಜಿಲ್ಲೆಯ ಭಾನಾಪುರದಿಂದ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಕ್ರಾಸ್ ವರೆಗೆ ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿ ನಂ 367 ರ ಬೈ ಪಾಸ್ ಕಾಮಗಾರಿಯ ಪ್ರಗತಿಯನ್ನು ಪರಿಶೀಲನೆ ನಡೆಸಿ
ಕಾಮಗಾರಿಯನ್ನು ತ್ವರಿತವಾಗಿ ಹಾಗೂ ಗುಣಮಟ್ಟದಿಂದ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂಧರ್ಭದಲ್ಲಿ ರೋಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕಳಕಪ್ಪ ಬಂಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಶೋಕ ವನ್ನಾಲ,ಬುಡ್ಡಪ್ಪ ಮೂಲಿಮನಿ,ಬಸವಂತಪ್ಪ ತಳವಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.