ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಕೋಟೆನಾಡಿನಲ್ಲಿ ಸಂಭ್ರಮಿಸಿದ ಕೈನಾಯಕರುಗಳು
ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಕೋಟೆನಾಡಿನಲ್ಲಿ ಸಂಭ್ರಮಿಸಿದ ಕೈನಾಯಕರುಗಳು.
ಜನಧ್ವನಿ ಕನ್ನಡ ಸುದ್ದಿಮೂಲ
ಗಜೇಂದ್ರಗಡ:
ರಾಜ್ಯ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಗಜೇಂದ್ರಗಡ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಲಕಾಲೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ವಿತರಣೆ ಮಾಡಿ ಕಾರ್ಯಕರ್ತರು ಸಂಭ್ರಮಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂಗಿದರು.
ಬಳಿಕ ರಾಜೂ ಸಾಂಗ್ಲಿಕರ , ಶಿವರಾಜ ಘೋರ್ಪಡೆ, ಎಚ್.ಎಸ್.ಸೊಂಪೂರ ಮಾತನಾಡಿ
ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದ ಫಲಿತಾಂಶ ತಲೆಕೆಳಗಾಗಿದೆ ಎಂದರು.
ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಮುರ್ತುಜಾ ಡಾಲಾಯತ, ವೆಂಕಟೇಶ್ ಮದುಗಲ, ಪುರಸಭೆ ಅಧ್ಯಕ್ಷ ಸುಭಾಷ್ ಮ್ಯಾಗೇರಿ, ಮುತ್ತಣ್ಣ ಮ್ಯಾಗೇರಿ, ಮುದಿಯಪ್ಪ ಮುಧೋಳ್, ಅಪ್ಪು ಮತ್ತಿಕಟ್ಟಿ,
ಹೆಚ್ ಎಸ್ ಸೋಂಪುರ. ಹಸನಸಾಬ ತಟಗಾರ, ಶಶಿಧರ್ ಹೂಗಾರ್, ರಫೀಕ್ ತೋರಗಲ್ಲ, ಉಮೇಶ್ ರಾಠೋಡ್, ಸಿದ್ದುಗೊಂಗಡಶೆಟ್ಟಿಮಠ ಸೇರಿದಂತೆ ಮುಖಂಡರು ಕಾರ್ಯಕರ್ತರು, ಭಾಗವಹಿಸಿದ್ದರು.
ವರದಿ: ಕಿರಣ ನಿಡಗುಂದಿ.