ಅಪಘಾತcrimeಅಂತಾರಾಷ್ಟ್ರೀಯಆತ್ಮಹತ್ಯೆಉಡುಪಿಉದ್ಯೋಗ ವಾರ್ತೆಗಳುಉಪಯುಕ್ತ ಮಾಹಿತಿಗಳುಗದಗಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುಬಾಗಲಕೋಟೆಬಿಸಿನೆಸ್ ಕನೆಕ್ಟ್ಬೆಳಗಾವಿರಾಜಕೀಯರಾಜ್ಯ ಸುದ್ದಿರಾಷ್ಟೀಯ ಸುದ್ದಿವಿಡಿಯೋಗಳುಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರಾದ ಸಚಿವೆ

ಇಂದು ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ಅಪಘಾತವಾಗಿದೆ. ನಾಯಿ ಅಡ್ಡ ಬಂದಿದ್ದನ್ನ ತಪ್ಪಿಸಲು ಹೋಗಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ನುಜ್ಜಗುಜ್ಜಾಗಿದೆ.

Share News

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತೆರಳುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಹೋದರ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಬಚಾವ್ ಆಗಿದ್ದಾರೆ.

ಇಂದು ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ಅಪಘಾತವಾಗಿದೆ. ನಾಯಿ ಅಡ್ಡ ಬಂದಿದ್ದನ್ನ ತಪ್ಪಿಸಲು ಹೋಗಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ನುಜ್ಜಗುಜ್ಜಾಗಿದೆ.

ಸಚಿವೆ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Share News

Related Articles

Leave a Reply

Your email address will not be published. Required fields are marked *

Back to top button