ಉದ್ಯೋಗ ವಾರ್ತೆಗಳುಉಪಯುಕ್ತ ಮಾಹಿತಿಗಳುಕನಕಗಿರಿಕುಷ್ಟಗಿಕೊಪ್ಪಳಗಂಗಾವತಿಗದಗಜಿಲ್ಲಾ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು
ಬೀದಿ ಬದಿ ವ್ಯಾಪಾರಿಗಳ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಕರ್ನಾಚಿ ಆಯ್ಕೆ
ಬೀದಿ ಬದಿ ವ್ಯಾಪಾರಿಗಳ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಕರ್ನಾಚಿ ಆಯ್ಕೆ.
ಗಜೇಂದ್ರಗಡ:
ಕರ್ನಾಟಕ ಪ್ರದೇಶ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಅಧ್ಯಕ್ಷರಾಗಿ ನಗರದ ಹಣ್ಣಿನ ವ್ಯಾಪಾರಿಯಾದ ಬಾಷೇಸಾಬ ಕರ್ನಾಚಿಯವರನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಬೀದಿ ಬದಿ ವ್ಯಾಪಾರಿಗಳ ರಾಜ್ಯಾಧ್ಯಕ್ಷರಾದ ಡಾ.ಸಿ.ಇ.ರಂಗಸ್ವಾಮಿ ಆದೇಶ ಪ್ರತಿ ನೀಡಿ ನೇಮಕ ಮಾಡಲಾಯಿತು.
ಬಳಿಕ ಡಾ.ಸಿ.ಇ.ರಂಗಸ್ವಾಮಿ ಮಾತನಾಡಿ ರಾಜ್ಯದಲ್ಲಿ ಎಲ್ಲಾ ಬೀದಿ ಬದಿ ವ್ಯಾಪಾರಿಗಳ ಸಂಘಟನೆ, ಆಗು ಹೋಗುಗಳ ಕುರಿತು ಚರ್ಚಿಸಿ ಸಂಘಟನೆಯನ್ನು ಸುಸಜ್ಜಿತವಾಗಿ ಜವಾಬ್ದಾರಿ ನಿಭಾಯಿಸಿ ಎಂದು ಮಾರ್ಗದರ್ಶನ ನೀಡಿದರು.
ಬಳಿಕ ನೂತನವಾಗಿ ನೇಮಕಗೊಂಡ ಭಾಷೇಸಾಬ ಕರ್ನಾಚಿ ಮಾತನಾಡಿ ರಾಜ್ಯಾಧ್ಯಕ್ಷರ ಮಾರ್ಗದರ್ಶನದಲ್ಲಿ ಯಾವುದೇ ಬೀದಿ ಬದಿ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಹಾಗೂ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸಲು ಶ್ರಮ ಪಡುತ್ತೇನೆ ಎಂದರು.