ಸ್ಥಳೀಯ ಸುದ್ದಿಗಳುಅಂತಾರಾಷ್ಟ್ರೀಯಉಡುಪಿಉದ್ಯೋಗ ವಾರ್ತೆಗಳುಉಪಯುಕ್ತ ಮಾಹಿತಿಗಳುಕನಕಗಿರಿಕುಷ್ಟಗಿಗಂಗಾವತಿಗದಗಧಾರವಾಡರಾಷ್ಟೀಯ ಸುದ್ದಿಲೇಖನವಿಡಿಯೋಗಳುಶಿವಮೊಗ್ಗಸಿಂಧನೂರುಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸಿ : ಮಿಥುನ ಪಾಟೀಲ.

Share News

ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸಿ : ಮಿಥುನ ಪಾಟೀಲ.

ರೋಣ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆ

ರೋಣ :

ರಾಜ್ಯ ಸರ್ಕಾರ ಮಹತ್ವದ ಕಾರ್ಯಕ್ರಮವಾದ ಗ್ಯಾರಂಟಿ ಯೋಜನೆಗಳು ಜನಪರ ಯೋಜನೆಗಳಾಗಿದ್ದು ಇವುಗಳ ಅನುಷ್ಠಾನದಲ್ಲಿ ಕೆಲವು ತಾಂತ್ರಿಕ ದೋಷಗಳು ಎದುರಾಗುತ್ತಿದ್ದು ಅವುಗಳನ್ನು ಶೀಘ್ರದಲ್ಲಿ ಪರಿಹರಿಸಿಬೇಕು ಎಂದು ರೋಣ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮಿಥುನ ಪಾಟೀಲ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರೋಣ ತಾಲೂಕಿನ ತಹಶಿಲ್ದಾರ ಕಚೇರಿಯ ಸಭಾಂಗಣದಲ್ಲಿ ಜುಲೈ 06 ರಂದು ಹಮ್ಮಿಕೊಂಡಿದ್ದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅದ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರವು ಸರ್ವರಿಗೂ ಸಮಬಾಳು ಸಮಪಾಲು ನೀಡುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಸೇರಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ಸಾಮಾನ್ಯ ಜನರ ಆರ್ಥಿಕ ಸಬಲೀಕರಣಕ್ಕೆ ತುಂಬಾ ಸಹಕಾರಿಯಾಗಿದ್ದು, ಇವುಗಳು ಸಮರ್ಪಕ ಅನುಷ್ಠಾನವಾಗುತ್ತಿವೆ. ತಾಂತ್ರಿಕ ದೋಷಗಳಿಂದಾಗಿ ಕೆಲವರಿಗೆ ಯೋಜನೆಗಳು ಸರಿಯಾಗಿ ತಲುಪುತ್ತಿಲ್ಲಾ. ಅದರಲ್ಲೂ ಗೃಹಲಕ್ಷ್ಮಿ ಯೋಜನೆಯಲ್ಲಿ ಮುಖ್ಯವಾಗಿ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ, ಅಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭವನ್ನು ದೊರಕಿಸಿಕೊಡಬೇಕು ಎಂದು ಹೇಳಿದರು.

ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ತಾಲ್ಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಬೇಕು. ಅಂಗಡಿಗಳಲ್ಲಿ ಕಡ್ಡಾಯವಾಗಿ ನಾಮಫಲಕ ಅಳವಡಿಸಬೇಕು ಹಾಗೂ ಪಡಿತರ ಕಾರ್ಡ್ನಲ್ಲಿರುವ ಪ್ರತಿ ಸದಸ್ಯರಿಗೆ ನೀಡುವ ಆಹಾರ ಸಾಮಾಗ್ರಿಗಳ ವಿವರವನ್ನು ಸಹ ಸೂಚನಾ ಫಲಕದಲ್ಲಿ ಅಳವಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

 

ಶಕ್ತಿ ಯೋಜನೆಯಡಿ ರೋಣ ತಾಲೂಕಿನಲ್ಲಿ ಇಲ್ಲಿಯವರೆಗೆ ಎಷ್ಟು ಮಹಿಳೆಯರು ಲಾಭ ತಗೆದುಕೊಂಡಿದ್ದಾರೆ, ಅದರಿಂದ ಎಷ್ಟು ಮಹಿಳೆಯರಿಗೆ ಅನಕೂಲ ಆಗಿದೆ, ಬಸ್ ಗಳ ಸಂಖ್ಯೆ ಸೇರಿದಂತೆ ಇತರ ಮಾಹಿತಿಯನ್ನು ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದರು.

ಯುವನಿಧಿ ಯೋಜನೆಯಡಿ ತಾಲೂಕಿನಲ್ಲಿ ಪದವಿ ಹಾಗೂ ಡಿಪ್ಲೋಮಾ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಎಷ್ಟು ಜನ ತಮ್ಮ ನೊಂದಣೆ ಮಾಡಿಕೊಂಡಿದ್ದಾರೆ. ಎಂದು ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್ ಕೆ ಇನಾಮದಾರ ಸೇರಿದಂತೆ ರೋಣ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು…

ವರದಿ : ಪ್ರಕಾಶ ಗುದ್ನೇಪ್ಪನವರ.


Share News

Related Articles

Leave a Reply

Your email address will not be published. Required fields are marked *

Back to top button