ಬ್ರೈಟ್ ಬಿಗಿನಿಂಗ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ
ನಗರ ಸಮೀಪದ ಬ್ರೈಟ್ ಬಿಗಿನಿಂಗ್ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟವು ಮಂಗಳವಾರ ನಡೆಯಿತು.
Janadhwani News Gajendragarh ಗಜೇಂದ್ರಗಡ : ನಗರ ಸಮೀಪದ ಬ್ರೈಟ್ ಬಿಗಿನಿಂಗ್ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟವು ಮಂಗಳವಾರ ನಡೆಯಿತು.
ಕ್ರೀಡಾಕೂಟವನ್ನು ಸಂಸ್ಥೆಯ ಅಧ್ಯಕ್ಷ ಸೀತಲ ಓಲೇಕಾರ ಉದ್ಘಾಟಿಸಿ ಮಾತನಾಡಿ ಶಾಲಾ ಕ್ರೀಡಾಕೂಟವು ವಿದ್ಯಾರ್ಥಿಗಳಿಗೆ ತಮ್ಮ ದೈಹಿಕ ಸಾಮರ್ಥ್ಯವನ್ನು ಪ್ರದರ್ಶಿಸಲು ಮತ್ತು ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಲು ಒಂದು ವೇದಿಕೆಯಾಗಿದೆ. ಇದು ವಿದ್ಯಾರ್ಥಿಗಳನ್ನು ಒಗ್ಗೂಡಿಸಿ, ಸಹಕಾರ ಮತ್ತು ಸ್ನೇಹವನ್ನು ಬೆಳೆಸಲು ಸಹಾಯ ಮಾಡುತ್ತದೆ. ಮಕ್ಕಳಲ್ಲಿ ಆತ್ಮ ವಿಶ್ವಾಸ, ಸ್ಪರ್ಧಾತ್ಮಕ ಮನೋಭಾವ, ಮೂಡಿಸುತ್ತದೆ ಎಂದರು.
ಬಳಿಕ ಸಂಸ್ಥೆಯ ಕಾರ್ಯದರ್ಶಿ ನಾಜೀಯಾ ಮುದಗಲ್ ಮಾತನಾಡಿ ಕಳೆದ ಬಾರಿಗಿಂತಲೂ ಈ ಬಾರಿ ಮುದ್ದು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಯಲ್ಲಿ ಭಾಗಿಯಾಗಿದ್ದು ವಿಶೇಷವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಯು.ಕೆ.ಜಿ. ವಿಧ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನು ತಂದಿದ್ದು ವಿಶೇಷವಾಗಿತ್ತು.
ಇದೇ ಸಂದರ್ಭದಲ್ಲಿ ಮುಖ್ಯ ಅಥಿತಿ ನೃತ್ಯ ತರಬೇತುದಾರ ಖಾಜಾ ಹಿರೇಹಾಳ,
ಶಾಲೆಯ ಶಿಕ್ಷಕಿಯರಾದ ಹೀನಾಕೌಸರ ಅರಳಿಕಟ್ಟಿ, ಅನುಷಾ ತಳವಾರ, ಶಬೀನಾ ಬೆಳ್ಳಟ್ಟಿ, ಅಮೃತಾ ಬದಿ, ಸಾವಿತ್ರಿ ಹಾವೇರಿ, ರವಿ ನಿಡಗುಂದಿ, ಅಜೀಜ ಬೆಳ್ಳಟ್ಟಿ ಸೇರಿದಂತೆ ಅನೇಕರು ಇದ್ದರು.