ಅನ್ನದಾನೇಶ್ವರ ಕಾಲೇಜಿನಲ್ಲಿ ʼಸಂಭ್ರಮ-2024ʼ ಕಾರ್ಯಕ್ರಮ ಇಂದು
ಅನ್ನದಾನೇಶ್ವರ ಕಾಲೇಜಿನಲ್ಲಿ ʼಸಂಭ್ರಮ-2024ʼ ಕಾರ್ಯಕ್ರಮ
ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಜು. 15ಕ್ಕೆ
ಗಜೇಂದ್ರಗಡ:ನಗರದ ಪುರ್ತಗೇರಿ ಕ್ರಾಸ್ ಬಳಿ ಇರುವ ಶ್ರೀ ಅನ್ನದಾನೇಶ್ವರ ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ 2024-25ನೇ ಸಾಲಿನ ವಿವಿಧ ಸಾಂಘಿಕ ಚಟುವಟಿಕೆಗಳ ಉದ್ಘಾಟನ ಸಮಾರಂಭ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ʼಸಂಭ್ರಮ-2024ʼ ಕಾರ್ಯಕ್ರಮವು ಜುಲೈ 15 ರಂದು ಬೆಳಿಗ್ಗೆ 10:30 ಗಂಟೆಗೆ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
ನರೇಗಲ್ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಅಧ್ಯಕ್ಷರಾದ ಮುಪ್ಪಿನ ಬಸವಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.ಕಾಲೇಜಿನ ಚೇರಮನ್ನರಾದ ವಿ. ವಿ. ವಸ್ತ್ರದ ಅಧ್ಯಕ್ಷತೆ ವಹಿಸಲಿದ್ದಾರೆ.
ಗದಗ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ (ಪಿಯು) ಉಪನಿರ್ದೇಶಕರಾದ ಜಿ. ಎನ್. ಕುರ್ತಕೋಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರೋಣ ಅಗ್ನಿಶಾಮಕ ದಳದ ಠಾಣಾಧಿಕಾರಿ ಮಂಜುನಾಥ ಮೆಲ್ಮನಿ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅನ್ನದಾನ ವಿಜಯ ವಿದ್ಯಾಪ್ರಸಾರಕ ಸಮಿತಿಯ ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ ದೊಡ್ಡಮೇಟಿ, ಆಡಳಿತಾಧಿಕಾರಿ ಎನ್. ಆರ್. ಗೌಡರ, ಕುಮಾರೇಶ್ವರ ಪದವಿ ಕಾಲೇಜಿನ ಚೇರಮನ್ನ ಎಸ್. ಎಸ್. ಪಟ್ಟೇದ, ಪಿಯು ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ಡಾ. ಬಿ. ವಿ. ಕಂಬಳ್ಯಾಳ, ಮುದಕಪ್ಪ ತೊಂಡಿಹಾಳ, ಶೈಕ್ಷಣಿಕ ಸಲಹೆಗಾರ ಶಿವಾನಂದ ಮಠದ ಪಾಲ್ಗೊಳ್ಳಲಿದ್ದಾರೆ.
ಇದೇ ವೇಳೆ ಕಾಲೇಜಿನಲ್ಲಿ ಅಳವಡಿಸಲಾದ ʼಅಗ್ನಿ ನಂದಿಸುವ ಉಪಕರಣದʼ ಉದ್ಘಾಟನೆ ನೆರವೇರಲಿದೆ ಹಾಗೂ ರೋಣ ತಾಲ್ಲೂಕು ಅಗ್ನಿಶಾಮಕ ದಳದ ಸಿಬ್ಬಂದಿಯವರಿಂದ ಅಗ್ನಿಸ್ಪರ್ಶದ ಪೂರ್ವ ಹಾಗೂ ನಂತರದ ಸೂಕ್ತ ಕ್ರಮಗಳ ಕುರಿತು ಪ್ರಾತ್ಯಕ್ಷಿಕ ಕಾರ್ಯಕ್ರಮ ನಡೆಯಲಿದೆ ಎಂದು ಪಿಯು ಪ್ರಾಚಾರ್ಯ ವಸಂತರಾವ್ ಗಾರಗಿ ಪ್ರಕಟಣೆಯಲ್ಲಿ ತಿಳಿಸಿದರು.