ರಾಜ್ಯ ಸುದ್ದಿಉಪಯುಕ್ತ ಮಾಹಿತಿಗಳುಟ್ರೆಂಡಿಂಗ್ ಸುದ್ದಿಗಳು
ಫೆಂಗಲ್ ಚಂಡಮಾರುತ ಅಪಾಯದ ಮುನ್ಸೂಚನೆ : ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ
ನಿರಂತರ ಮಳೆ ಸುರಿಯುವ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗು (ಡಿ.2): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಫೆಂಗಲ್ ಚಂಡಮಾರುತ ಉಂಟಾಗಿದ್ದು ದಕ್ಷಿಣ ಭಾರತದ ರಾಜ್ಯಗಳ ಮೇಲೆ ಭಾರೀ ಪರಿಣಾಮ ಬೀರಿದೆ. ತಮಿಳುನಾಡು ಸಂಪೂರ್ಣ ಮಳೆಯಲ್ಲಿ ತೊಯ್ದು ಹೋಗಿದ್ದರೆ, ಕರ್ನಾಟಕದಲ್ಲೂ ಮಳೆ ಕೆಲವು ಜಿಲ್ಲೆಗಳಲ್ಲಿ ಅಬ್ಬರಿಸಿದೆ. ಮುಂಜಾಗ್ರತಾ ಕ್ರಮವಾಗಿ ಕೆಲವೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಶಾಲಾ-ಕಾಲೇಜಿಗೆ ರಜೆ ನೀಡುವ ನಿರ್ಧಾರ ಮಾಡಿದ್ದಾರೆ. ಈಗಾಗಲೇ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೋಮವಾರ ರಜೆ ಘೋಷಣೆ ಮಾಡಲಾಗಿದ್ದರೆ, ಕೊಡಗು ಜಿಲ್ಲೆಯಲ್ಲಿ ಮಂಗಳವಾರವೂ ರಜೆ ಘೋಷಣೆ ಮಾಡಲಾಗಿದೆ. ಫೆಂಗಲ್ ಚಂಡಮಾರುತದ ಎಫೆಕ್ಟ್ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಮಂಗಳವಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಭಾರಿ ಮಳೆ ಹಿನ್ನೆಲೆ ನಾಳೆ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.