
ರಾಜ್ಯದಲ್ಲಿ ಡೆಂಗ್ಯೂ ಅಬ್ಬರ: ವೈದ್ಯಕೀಯ ಚಿಕಿತ್ಸೆಗೆ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿ : ರಾಜೂ ಸಾಂಗ್ಲೀಕರ.
ರಾಜ್ಯದಲ್ಲಿ ಡೆಂಗ್ಯೂ ಅಬ್ಬರ: ವೈದ್ಯಕೀಯ ಚಿಕಿತ್ಸೆಗೆ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿ : ರಾಜೂ ಸಾಂಗ್ಲೀಕರ.
ಗಜೇಂದ್ರಗಡ:
ಡೆಂಗ್ಯೂ ನಮ್ಮ ರಾಜ್ಯಾದ್ಯಂತ ಹರಡುತ್ತಿದೆ. ಕೋವಿಡ್ ಮಾದರಿಯಲ್ಲಿ ಚಿಕಿತ್ಸಾ ವ್ಯವಸ್ಥೆ ಆಗಬೇಕು ಯಾವುದೇ ಕಾರಣಕ್ಕೂ ನಗರದಲ್ಲಿ ಡೆಂಗ್ಯೂ ಬರದಂತೆ ಸೂಕ್ತ ಚಿಕಿತ್ಸೆಗೆ ಮುಂದಾಗಬೇಕು ಎಂದು ಗಜೇಂದ್ರಗಡ ಸಮುದಾಯ ಆರೋಗ್ಯ ರಕ್ಷಾ ಸಮಿತಿ ಸದಸ್ಯ ರಾಜೂ ಸಾಂಗ್ಲೀಕರ ಹೇಳಿದರು.
ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ರಕ್ಷಾ ಸಮಿತಿಯ ಸರ್ವ ಸದಸ್ಯರು ಹಾಗೂ ವೈದ್ಯರ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ರಾಜ್ಯದಲ್ಲಿ ತಾಂಡವಾಡುತ್ತಿರುವ ಡೆಂಗ್ಯೂ ರೋಗ ನಿಯಂತ್ರಣಕ್ಕೆ ಹಾಗೂ ಮುಂಬರುವ ದಿನಗಳಲ್ಲಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ತ್ವರಿತಗತಿಯಲ್ಲಿ ಸಮರ್ಪಕವಾಗಿ ಸೇವೆ ನೀಡಬೇಕೆಂದು ಸೂಚಿಸಲಾಯಿತು. ನಗರದಲ್ಲಿನ ಶಾಲಾ ಕಾಲೇಜುಗಳಲ್ಲಿ ತೆರಳಿ ಡೆಂಗ್ಯೂ ಜ್ವರ ನಿಯಂತ್ರಣ, ಸೊಳ್ಳೆಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಸಲಹೆ ನೀಡಿದರು.
ಬಳಿಕ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಶರಣಪ್ಪ ಚಳಗೇರಿ ಮಾತನಾಡಿ ಡೆಂಗ್ಯೂ ಜ್ವರ ನಿಯಂತ್ರಣ ಎಂದರೆ ಸೊಳ್ಳೆಗಳ ನಿಯಂತ್ರಣ.ಡೆಂಗ್ಯೂ ಕಾಯಿಲೆಗೆ ನಿಖರವಾದ ಚಿಕಿತ್ಸೆ ಇಲ್ಲ. ಸೊಳ್ಳೆಗಳ ನಿಯಂತ್ರಣ ಬಹಳ ಮುಖ್ಯವಾದುದು ಎಂದು ತಿಳಿಸಿದರು.ಅದನ್ನು ತಡೆಗಟ್ಟಲು ಬೇಕಾದ ಪೂರ್ವ ಸಿದ್ಧತೆಗಳನ್ನು ತಯಾರು ಮಾಡಿಕೊಳ್ಳಿ ಎಂದರು.
ಇದೇ ಸಂದರ್ಭದಲ್ಲಿ
ಸಮುದಾಯ ಆರೋಗ್ಯ ಕೇಂದ್ರಕ್ಕೆ ಅವಶ್ಯಕವಾಗಿರುವ ಪಟ್ಟಿಯನ್ನು ತಯಾರಿಸಿ ಮಾನ್ಯ ಶಾಸಕರಗೆ ಮನವಿ ಸಲ್ಲಿಸಲು ತೀರ್ಮಾನ ಕೈಗೊಳ್ಳಲಾಯಿತು.
ಇದೇ ಸಂದರ್ಭದಲ್ಲಿ ಅರಿಹಂತ ಬಾಗಮಾರ, ರೇಣುಕಾ ಕುಂಬಾರ, ಡಾ.ಅನಿಲ ಕುಮಾರ ತೋಟದ, ರಮೇಶ ರಾಠೋಡ ಸೇರಿದಂತೆ ಅನೇಕರು ಇದ್ದರು.