ಅಂತಾರಾಷ್ಟ್ರೀಯಆರೋಗ್ಯ ಇಲಾಖೆಉಡುಪಿಉದ್ಯೋಗ ವಾರ್ತೆಗಳುಉಪಯುಕ್ತ ಮಾಹಿತಿಗಳುಕನಕಗಿರಿಕಳ್ಳತನಕುಕನೂರುಕುಷ್ಟಗಿಕೊಪ್ಪಳಗಂಗಾವತಿಗದಗಚುನಾವಣಾ ಬಾಂಡ್ ಅಕ್ರಮಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುಧಾರವಾಡಪರೀಕ್ಷೆಬಿಗ್ ಬಾಸ್ಬಿಸಿನೆಸ್ ಕನೆಕ್ಟ್ಬೆಳಗಾವಿರಾಜಕೀಯರಾಜ್ಯ ಸುದ್ದಿಲೇಖನವಿಡಿಯೋಗಳುಶಿವಮೊಗ್ಗಸಿಂಧನೂರುಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು
ನಾಳೆ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ಸಾರ್ವಜನಿಕ ರಜೆ..!
ನಾಳೆ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ಸಾರ್ವಜನಿಕ ರಜೆ..!
ಜನಧ್ವನಿ ಕನ್ನಡ ಸುದ್ದಿಮೂಲ ಬೆಂಗಳೂರು:
ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್.ಎಂ. ಕೃಷ್ಣ ನಿಧನ ಹಿನ್ನೆಲೆ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಲಾಗಿದೆ.
ನಾಳೆ ಅವರ ಹುಟ್ಟೂರು ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅವರಿಗೆ ಸಂತಾಪ ಸಲ್ಲಿಸಲು ಇಂದು ಮಂಡ್ಯ ಜಿಲ್ಲೆಯಲ್ಲಿ ರಜೆ ಘೋಷಿಸಲಾಗಿದ್ದು, ನಾಳೆ ರಾಜ್ಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೂ ರಜೆ ಇರಲಿದ್ದು, ಇಂದಿನಿಂದ ಮೂರು ದಿನಗಳವರೆಗೆ ಶೋಕಾಚರಣೆ ಇರಲಿದೆ. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡದ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ.