
“ಅನ್ ಲಾಕ್ ರಾಘವ” ಟ್ರೇಲರ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್ – ಚಿತ್ರತಂಡಕ್ಕೆ ಶುಭ ಹಾರೈಸಿದ ‘ದೊಡ್ಮನೆ’ ಸೊಸೆ!
"ಉದ್ಘರ್ಷ" ಸೇರಿ ಈ ಚಿತ್ರದ ತನಕ 4 ಸಿನಿಮಾ ನಿರ್ಮಾಣ ಮಾಡಿದ್ದೇನೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದರು ನಿರ್ಮಾಪಕ ಮಂಜುನಾಥ್ ದಾಸೇಗೌಡ.
ಬೆಂಗಳೂರು : “ಅನ್ ಲಾಕ್ ರಾಘವ” ಟ್ರೇಲರ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್ ಟೀಸರ್ & ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್, ಪದಾಧಿಕಾರಿಗಳಾದ ಕುಶಾಲ್, ಭಾ.ಮ.ಗಿರೀಶ್, ನಟ ಪ್ರಥಮ್, ಜಿಮ್ ರವಿ ಸೇರಿ ಅನೇಕ ಗಣ್ಯರು ಸಮಾರಂಭದಲ್ಲಿ ಹಾಜರಿದ್ದರು.
“ಅನ್ ಲಾಕ್ ರಾಘವ” ಚಿತ್ರದ ಶೀರ್ಷಿಕೆ ಕೆಲ ದಿನಗಳ ಹಿಂದೆ ಅಶ್ವಿನಿ ಪುನೀತ್ ರಾಜಕುಮಾರ್ ಅವರೇ ಬಿಡುಗಡೆ ಮಾಡಿದ್ದರು. ಇಂದು ಟ್ರೇಲರ್ ಕೂಡ ಅವರಿಂದಲೇ ಬಿಡುಗಡೆಯಾಗಿದ್ದು ಬಹಳ ಸಂತೋಷವಾಗಿದೆ ಎಂದರು ನಿರ್ದೇಶಕ ದೀಪಕ್ ಮಧುವನಹಳ್ಳಿ.
“ಉದ್ಘರ್ಷ” ಸೇರಿ ಈ ಚಿತ್ರದ ತನಕ 4 ಸಿನಿಮಾ ನಿರ್ಮಾಣ ಮಾಡಿದ್ದೇನೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದರು ನಿರ್ಮಾಪಕ ಮಂಜುನಾಥ್ ದಾಸೇಗೌಡ.
ಮಿಲಿಂದ್ & ರೆಚೆಲ್ ಡೇವಿಡ್ ನಾಯಕ-ನಾಯಕಿಯಾಗಿ ನಟಿಸಿರುವ “ಅನ್ ಲಾಕ್ ರಾಘವ” ಚಿತ್ರವನ್ನು ಮಂಜುನಾಥ್ ದಾಸೇಗೌಡ, ಗಿರೀಶ್ ಕುಮಾರ್ ನಿರ್ಮಿಸಿದ್ದಾರೆ. ಕಥೆ, ಚಿತ್ರಕಥೆ “ರಾಮ ರಾಮ ರೆ” ಖ್ಯಾತಿಯ ಸತ್ಯಪ್ರಕಾಶ್ ಬರೆದಿದ್ದಾರೆ. ಲವಿತ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ “ಅನ್ ಲಾಕ್ ರಾಘವ” ಚಿತ್ರ ಫೆಬ್ರವರಿ 7ರಂದು ತೆರೆಗೆ ಬರಲಿದೆ.