
ಡಯಾಲಿಸಿಸ್ ಚಿಕಿತ್ಸಾ ಕೇಂದ್ರ ಉದ್ಘಾಟನೆಗೊಳಿಸಿದ ಶಾಸಕ ಜಿ.ಎಸ್. ಪಾಟೀಲ
ಡಯಾಲಿಸಿಸ್ ಚಿಕಿತ್ಸಾ ಕೇಂದ್ರ ಉದ್ಘಾಟನೆಗೊಳಿಸಿದ ಶಾಸಕ ಜಿ.ಎಸ್. ಪಾಟೀಲ
ಜನಧ್ವನಿ ಡಿಜಿಟಲ್ ಕನ್ನಡ ವೆಬ್ ಪೋರ್ಟಲ್ .
ಗಜೇಂದ್ರಗಡ:
ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ರೋಗಿ ಗಳಿಗೆ ಉಚಿತವಾಗಿ ಮೂತ್ರ ಪಿಂಡದ ಆರೈಕೆ ಸಮುದಾ ಯ ಕೇಂದ್ರದಲ್ಲಿ ಲಭ್ಯವಿದ್ದು, ಅದರ ಸದುಪಯೋಗ ರೋಗಿಗಳು ಪಡೆದುಕೊಳ್ಳಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಸ್ಥಳೀಯ ರೋಣ ರಸ್ತೆಯ ಸಮುದಾಯ ಸರ್ಕಾರಿ ಆಸ್ಪತ್ರೆಯಲ್ಲಿ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆ ಯಡಿಯಲ್ಲಿ ಪಬ್ಲಿಕ್ ಪ್ರೈವೇಟ್ ಪಾರ್ಟಿಸಿಪೆಟ್, ಡಿಸಿಡಿಸಿ ಹೆಲ್ತ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ (ಕಿಡ್ನಿ ರ್ಕೇ) ಸಹಯೋಗದಲ್ಲಿ ಗುರುವಾರ ಡಯಾಲಿಸಿಸ್ ಚಿಕಿತ್ಸಾ ಕೇಂದ್ರ ಉದ್ಘಾಟಿಸಿ ಮಾತನಾಡಿದರು.
ತಾಲೂಕಿನಲ್ಲಿ ಮೂತ್ರ ಕೋಶದ ತೊಂದರೆಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಈ ಕೇಂದ್ರವು ಅನುಕೂಲವಾಗಲಿದೆ. ಆಸ್ಪತ್ರೆಯ ಆರೋಗ್ಯ ಸುರಕ್ಷಾ ಸಮಿತಿ ಸದಸ್ಯರುಸಹಮೂತ್ರ ಕೋಶದಸಮಸ್ಯೆ ಯಿಂದ ಬಳಲುತ್ತಿರುವ ರೋಗಿಗಳು ಚಿಕಿತ್ಸೆಗಾಗಿ ರೋಣ ಹಾಗೂ ಗದಗ ಮತ್ತು ಕೊಪ್ಪಳಕ್ಕೆ ಹೋಗಬೇಕಾದ ಪರಿಣಾಮ ರೋಗಿಗಳಿಗೆ ಆಗುತ್ತಿರುವ ತೊಂದರೆ ಕುರಿತು ಗಮನ ಸೆಳೆದಾಗ ಪಟ್ಟಣದಲ್ಲಿ ಡಯಾಲಿಸಿಸ್ ಕೇಂದ್ರ ಆರಂಭಿಸುವ ಭರವಸೆ ನೀಡಿದಂತೆ ಇಂದು ಡಯಾಲಿಸಿಸ್ ಚಿಕಿತ್ಸಾ ಕೇಂದ್ರ ಉದ್ಘಾಟಿಸಲಾಗಿದೆ ಎಂದರು.
ಗಜೇಂದ್ರಗಡ ಡಯಾಲಿಸಿಸ್ ಚಿಕಿತ್ಸಾ ಘಟಕವನ್ನು ಶಾಸಕ ಜಿ.ಎಸ್.ಪಾಟೀಲ ಉದ್ಘಾಟಿಸಿದರು.
ಆಸ್ಪತ್ರೆಯಲ್ಲಿರುವ ವೈದ್ಯರು ಮತ್ತು ತಾಂತ್ರಿಕ ಸಿಬ್ಬಂದಿಗಳ ಮೂಲಕ ಆಸ್ಪತ್ರೆಯಲ್ಲಿ ಹೆರಿಗೆ ಸಿಜರಿನ್ ಘಟಕ ಆರಂಭಿಸಲಾಗಿದೆ. ಸರ್ಕಾರಿ ಆಸ್ಪತ್ರೆ ಹಾಗೂ ಇಲ್ಲಿ ಸೇವೆಸಲ್ಲಿಸುವವೈದ್ಯಾಧಿಕಾರಿಗಳು ಸಮಾಜದ ಆಸ್ತಿಯಾಗಿದ್ದಾರೆ.
ಆಸ್ಪತ್ರೆಯ ಸದ್ಬಳಿಕೆ, ವಿಶ್ವಾಸದಿಂದ ವೈದ್ಯರ ಸೇವೆ ಪಡೆದುಕೊಳ್ಳಬೇಕಿದೆ. ಹೀಗಾಗಿ ಸಾರ್ವಜನಿಕರ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳ ಸಹಕಾರವು ಮುಖ್ಯವಾಗಿದೆ ಎಂದರು.
ಆರೋಗ್ಯ ಸುರಕ್ಷಾ ಸಮಿತಿ ಸದಸ್ಯರಾದ ರಾಜು ಸಾಂಗ್ಲೀಕರ, ಶರಣಪ್ಪ ಚಳಗೇರಿ ಮಾತನಾಡಿ, ಕಿಡ್ನಿ ಸಮಸ್ಯೆಯಿಂದ ಬಳಲುವ ರೋಗಿಗಳು ವಾರದಲ್ಲಿ 2/3 ಬಾರಿ ಡಯಾಲಿಸಿಸ್‌ಗೆ ಒಳಗಾಗಬೇಕು. ಆದರೆ ಪಟ್ಟಣದಲ್ಲಿ ಡಯಾಲಿಸಿಸ್ ಚಿಕಿತ್ಸಾ ಕೇಂದ್ರವಿಲ್ಲದರಿಂದ ರೋಗಿಗಳು ಗದಗ, ರೋಣ, ಕೊಪ್ಪಳ ಹಾಗೂ ಹುಬ್ಬಳ್ಳಿಗೆ ತೆರಳಬೇಕಾಗಿತ್ತು. ರೋಗಿಗಳ ಕಷ್ಟ ಅರಿತ ಶಾಸಕ ಜಿ.ಎಸ್. ಪಾಟೀಲ ಪಟ್ಟಣದಲ್ಲಿ ಡಯಾಲಿಸಿಸ್ ಚಿಕಿತ್ಸಾ ಕೇಂದ್ರ ಆರಂಭಿಸಿ ಬಡರೋಗಿಗಳಿಗೆ ನೆರವಾಗಿದ್ದಾರೆ ಎಂದು ಹೇಳಿದರು.
ಜಿಲ್ಲೆಯ ಡಯಾಲಿಸಿಸ್ ಕೇಂದ್ರದ ಆಡಳಿತಾಧಿಕಾರಿ ಶಿದ್ದಲಿಂಗೇಶ್ವರ ಶಿವತಿಂಪಿಗೇರ ಮಾತನಾಡಿದರು.
ಡಾ. ಅನೀಲಕುಮಾರ ತೋಟದ, ಪುರಸಭೆ ವಿಪಕ್ಷ ನಾಯಕ ಮುರ್ತುಜಾ ಡಾಲಾಯತ, ಮುಖಂಡರಾದ ಸಿದ್ದಪ್ಪ ಬಂಡಿ, ಅಶೋಕ ಬಾಗಮಾರ, ವೀರಣ್ಣ ಶೆಟ್ಟರ, ರಫೀಕ್ ತೋರಗಲ್, ಸುರೇಂದ್ರ ಸಾ ರಾಯಬಾಗಿ, ಶ್ರೀಧರ ಬಿದರಳ್ಳಿ, ಬಸವರಾಜ ಹೂಗಾರ, ಯಲ್ಲಪ್ಪ ಬಂಕದ, ಎಫ್.ಎಸ್. ಕರಿದುರಗನವರ, ಉಮೇಶ ರಾಠೋಡ, ಸಿದ್ದು ಗೊಂಗಡಶೆಟ್ಟಿಮಠ ಹನಮಂತಗೌಡ ಗೌಡರ, ಪ್ರಕಾಶ ರಾಠೋಡ ಸೇರಿದಂತೆ ಅನೇಕರು ಇದ್ದರು.