ನಾಳೆ, ಜುಲೈ 16ರಂದು ಈ ಶಾಲೆಗಳಿಗೆ ರಜೆ ಘೋಷಣೆ.
ಶಿವಮೊಗ್ಗ::
ರಾಜ್ಯ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ಭಾರೀ ಪ್ರಮಾಣದಲ್ಲಿ ವಾಯುಭಾರ ಕುಸಿತವಾಗಿದ್ದು, 7.6 ಕಿಮೀ ಎತ್ತರದಲ್ಲಿ ಟ್ರಫ್ ಬೀಸುತ್ತಿರುವ ಕಾರಣ ಮಳೆ ಬಿರುಸು ಪಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಾಳೆ, ಅಂದರೆ ಜುಲೈ 16ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ.
ನಿರಂತರವಾಗಿ ಪುನರ್ವಸು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ (ಜುಲೈ 16) ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ಆದೇಶ ಪ್ರಕಟಿಸಿದ್ದಾರೆ.
ಜುಲೈ 19ರವರೆಗೆ ಇದೇ ರೀತಿ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಜುಲೈ 17ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಜುಲೈ 15 ಮತ್ತು 16ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 17 ರಿಂದ 19ರ ವರೆಗೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಇಂದು ಹಾಗೂ ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.